TSK

TSK · 1 ತಿಮೊಥೆಯನಿಗೆ 1:2

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.

ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.

ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.

ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.