TSK

TSK · 1 ತಿಮೊಥೆಯನಿಗೆ 2:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆರೂಸಲೇಮಿನಲ್ಲಿ ಅರಸನಾಗಿದ್ದ ದಾವೀದನ ಮಗನಾದ ಪ್ರಸಂಗಿಯ ಮಾತುಗಳು.

¶ ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.

ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.

¶ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?

ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.

ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.