TSK

TSK · 2 ಪೂರ್ವಕಾಲವೃತ್ತಾ 15:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,

ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”

ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.