1 ಅರಸುಗಳು 3:2
TSK
ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
TSK
مراجع Treasury of Scripture Knowledge في ಕನ್ನಡ IRV.
ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.
ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.
ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.