TSK

TSK · 2 ಪೂರ್ವಕಾಲವೃತ್ತಾ 17:11

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

¶ ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.

ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.

ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.