¶ ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,
TSK
TSK · 2 ಪೂರ್ವಕಾಲವೃತ್ತಾ 17:6
مراجع Treasury of Scripture Knowledge في ಕನ್ನಡ IRV.
ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?