TSK

TSK · 2 ಪೂರ್ವಕಾಲವೃತ್ತಾ 18:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.

ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.

ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.

ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.

¶ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›

¶ ಆತನು ಉತ್ತರವಾಗಿ ಅವರಿಗೆ ‹“ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.›

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,