TSK

TSK · 2 ಪೂರ್ವಕಾಲವೃತ್ತಾ 19:10

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.