TSK

TSK · 2 ಪೂರ್ವಕಾಲವೃತ್ತಾ 2:3

مراجع Treasury of Scripture Knowledge في ಕನ್ನಡ IRV.

العودة إلى المقطع

ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

¶ “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.

¶ “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

¶ ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.

¶ ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.

ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.

¶ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.