TSK

TSK · 2 ಪೂರ್ವಕಾಲವೃತ್ತಾ 2:5

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

¶ ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.

ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.

ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.

ಯೆಹೋವನು ದೊಡ್ಡವನೆಂದೂ, ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.

ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.

ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.

ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,