TSK

TSK · 2 ಪೂರ್ವಕಾಲವೃತ್ತಾ 20:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.

ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?

ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.

ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,

ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.