ಆದಿಕಾಂಡ 14:7
TSK
ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
TSK
مراجع Treasury of Scripture Knowledge في ಕನ್ನಡ IRV.
ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.
ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.
ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.