ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.
TSK
TSK · 2 ಪೂರ್ವಕಾಲವೃತ್ತಾ 20:9
مراجع Treasury of Scripture Knowledge في ಕನ್ನಡ IRV.
¶ “ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
¶ “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
¶ ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
‹ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ”› ಅಂದನು.