¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
TSK
TSK · 2 ಪೂರ್ವಕಾಲವೃತ್ತಾ 21:13
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.
ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
‘ಅಯ್ಯೋ, ಪಟ್ಟಣವನ್ನು ನರಹತ್ಯದಿಂದ ಕಟ್ಟುವವನೂ, ಊರನ್ನು ಅನ್ಯಾಯದಿಂದ ಸ್ಥಾಪಿಸುವವರ ಗತಿಯನ್ನು ಏನು ಹೇಳಲಿ!