TSK

TSK · 2 ಪೂರ್ವಕಾಲವೃತ್ತಾ 23:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

¶ ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.

ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.

ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.

ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.

ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”

ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.