TSK

TSK · 2 ಪೂರ್ವಕಾಲವೃತ್ತಾ 24:27

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.

¶ ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.

ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.

ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.