TSK

TSK · 2 ಪೂರ್ವಕಾಲವೃತ್ತಾ 25:14

مراجع Treasury of Scripture Knowledge في ಕನ್ನಡ IRV.

العودة إلى المقطع

ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.

ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.

¶ ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.