TSK

TSK · 2 ಪೂರ್ವಕಾಲವೃತ್ತಾ 25:5

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.

¶ ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.

ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.

ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;