TSK

TSK · 2 ಪೂರ್ವಕಾಲವೃತ್ತಾ 26:6

مراجع Treasury of Scripture Knowledge في ಕನ್ನಡ IRV.

العودة إلى المقطع

ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.

¶ ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

¶ ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.

ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.

¶ ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.