TSK

TSK · 2 ಪೂರ್ವಕಾಲವೃತ್ತಾ 26:9

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.

ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.

ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು.

¶ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.