TSK

TSK · 2 ಪೂರ್ವಕಾಲವೃತ್ತಾ 28:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.

ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.

ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”

ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!