TSK

TSK · 2 ಪೂರ್ವಕಾಲವೃತ್ತಾ 28:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

¶ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.

¶ ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.

ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.