¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
TSK
TSK · 2 ಪೂರ್ವಕಾಲವೃತ್ತಾ 28:6
مراجع Treasury of Scripture Knowledge في ಕನ್ನಡ IRV.
‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
¶ ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.
ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.
ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.