ಆದಿಕಾಂಡ 22:14
TSK
ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
TSK
مراجع Treasury of Scripture Knowledge في ಕನ್ನಡ IRV.
ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
¶ ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.
¶ ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.