“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.
TSK
TSK · 2 ಪೂರ್ವಕಾಲವೃತ್ತಾ 30:5
مراجع Treasury of Scripture Knowledge في ಕನ್ನಡ IRV.
¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
¶ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
¶ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
¶ ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.