TSK

TSK · 2 ಪೂರ್ವಕಾಲವೃತ್ತಾ 31:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;

ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.

ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

¶ ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.

ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.

ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ

ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

¶ “ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.

ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.