ಯಾಜಕಕಾಂಡ 25:32
TSK
ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
TSK
مراجع Treasury of Scripture Knowledge في ಕನ್ನಡ IRV.
ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.
ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.