“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.
TSK
TSK · 2 ಪೂರ್ವಕಾಲವೃತ್ತಾ 31:3
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
¶ “‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
¶ ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
¶ ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.