TSK

TSK · 2 ಪೂರ್ವಕಾಲವೃತ್ತಾ 32:15

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.

ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ

¶ “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?

¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.

ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.