¶ ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
TSK
TSK · 2 ಪೂರ್ವಕಾಲವೃತ್ತಾ 32:21
مراجع Treasury of Scripture Knowledge في ಕನ್ನಡ IRV.
ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
¶ “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
¶ ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,