TSK

TSK · 2 ಪೂರ್ವಕಾಲವೃತ್ತಾ 32:5

مراجع Treasury of Scripture Knowledge في ಕನ್ನಡ IRV.

العودة إلى المقطع

¶ ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.

ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,

ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.

ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.

¶ ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.

ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.

¶ ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.

ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.