TSK

TSK · 2 ಪೂರ್ವಕಾಲವೃತ್ತಾ 33:18

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.

ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.