ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
TSK
TSK · 2 ಪೂರ್ವಕಾಲವೃತ್ತಾ 34:1
مراجع Treasury of Scripture Knowledge في ಕನ್ನಡ IRV.
ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.
¶ ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
¶ ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
¶ ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
¶ ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
¶ ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.
‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›