TSK

TSK · 2 ಪೂರ್ವಕಾಲವೃತ್ತಾ 34:30

مراجع Treasury of Scripture Knowledge في ಕನ್ನಡ IRV.

العودة إلى المقطع

ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.

ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

¶ ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;

¶ ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.

ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.

ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.

¶ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.