¶ ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
TSK
TSK · 2 ಪೂರ್ವಕಾಲವೃತ್ತಾ 35:27
مراجع Treasury of Scripture Knowledge في ಕನ್ನಡ IRV.
ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.