TSK

TSK · 2 ಪೂರ್ವಕಾಲವೃತ್ತಾ 35:8

مراجع Treasury of Scripture Knowledge في ಕನ್ನಡ IRV.

العودة إلى المقطع

ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,

ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.

ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.

¶ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,

¶ ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.