ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
TSK
TSK · 2 ಪೂರ್ವಕಾಲವೃತ್ತಾ 36:19
مراجع Treasury of Scripture Knowledge في ಕನ್ನಡ IRV.
ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.
ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.