TSK

TSK · 2 ಪೂರ್ವಕಾಲವೃತ್ತಾ 36:21

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.

¶ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.

¶ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”