TSK

TSK · 2 ಪೂರ್ವಕಾಲವೃತ್ತಾ 4:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.

¶ ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.

ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,

ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.

ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.

ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.