ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
TSK
TSK · 2 ಪೂರ್ವಕಾಲವೃತ್ತಾ 5:10
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
¶ ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
¶ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
¶ ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು.
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.