ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.
TSK
TSK · 2 ಪೂರ್ವಕಾಲವೃತ್ತಾ 6:18
مراجع Treasury of Scripture Knowledge في ಕನ್ನಡ IRV.
ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
‹ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?›
¶ “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;