TSK

TSK · 2 ಪೂರ್ವಕಾಲವೃತ್ತಾ 6:23

مراجع Treasury of Scripture Knowledge في ಕನ್ನಡ IRV.

العودة إلى المقطع

ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.

ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.

ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.

ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.

ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.