ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
TSK
TSK · 2 ಪೂರ್ವಕಾಲವೃತ್ತಾ 6:28
مراجع Treasury of Scripture Knowledge في ಕನ್ನಡ IRV.
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
¶ “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
¶ ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.
ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
¶ ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.