TSK

TSK · 2 ಪೂರ್ವಕಾಲವೃತ್ತಾ 6:38

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,

ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”