TSK

TSK · 2 ಪೂರ್ವಕಾಲವೃತ್ತಾ 6:40

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.

ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,

ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.

ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.

ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.

ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.