¶ ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
TSK
TSK · 2 ಪೂರ್ವಕಾಲವೃತ್ತಾ 7:1
مراجع Treasury of Scripture Knowledge في ಕನ್ನಡ IRV.
¶ ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
¶ ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.
¶ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.