TSK

TSK · 2 ಪೂರ್ವಕಾಲವೃತ್ತಾ 9:29

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.

ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.

¶ ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.

¶ ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.

¶ ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

¶ ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.

ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.