ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
TSK
TSK · 2 ಕೊರಿಂಥದವರಿಗೆ 13:6
مراجع Treasury of Scripture Knowledge في ಕನ್ನಡ IRV.
¶ ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.