TSK

TSK · 2 ಕೊರಿಂಥದವರಿಗೆ 5:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

¶ ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.

¶ ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

¶ ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.