ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
TSK
TSK · 2 ಕೊರಿಂಥದವರಿಗೆ 6:13
مراجع Treasury of Scripture Knowledge في ಕನ್ನಡ IRV.
ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
‹ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.›
¶ ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
¶ ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.